ಭೋಪಾಲ್: ಹೆಣ್ಣು ಮಕ್ಕಳಿಗೆ ವಿಶೇಷ ಸ್ಥಾನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ವಿಶೇಷ ಆದೇಶ ಹೊರಡಿಸಿದ್ದು ಕನ್ಯಾ ಪೂಜೆಯನ್ನು ಕಡ್ಡಾಯಗೊಳಿಸಿದೆ.
ರಾಜ್ಯದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮ ಪ್ರಾರಂಭಿಸುವ ಮುನ್ನ ಹೆಣ್ಣನ್ನು ದೇವರ ಸ್ಥಾನದಲ್ಲಿಟ್ಟು ಪೂಜಿಸುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.
ಯಾವುದೇ ಸರ್ಕಾರಿ ಕಾರ್ಯಕ್ರಮ ಪ್ರಾರಂಭಕ್ಕೆ ಮುನ್ನ ಮುಖ್ಯ ಅತಿಥಿಗಳು ಕನ್ಯಾ ಪೂಜೆ ನೆರವೇರಿಸಬೇಕು. ಈ ಬಗ್ಗೆ ಸಂಬಂಧಿಸಿದ ಇಲಾಖೆ ಸಕಲ ಸಿದ್ದತೆ ಮಾಡಿಕೊಳ್ಲಲಿದೆ ಎಂದು ಸರ್ಕಾರ ಹೇಳಿದೆ.