ಕಾಸರಗೋಡು: ಕರ್ನಾಟಕ ಸರ್ಕಾರದ ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿಗೆ ಪಾತ್ರರಾದ ಗಡಿನಾಡಿನ ಹಿರಿಯ ಸಾಹಿತಿ, ಭಾಷಾಂತರಕಾರ ಎ.ನರಸಿಂಹ ಭಟ್ ಅವರನ್ನು ಅವರ ಸ್ವಗೃಹದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಶಾಲು ಹೊದಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ, ಸಂಘಟಕ ಜಗದೀಶ್ ಕೂಡ್ಲು, ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯ ಸ್ಥಾಪಕ ವಾಮನ ರಾವ್ ಬೇಕಲ್, ಸಂಧ್ಯಾ ಟೀಚರ್, ವಾಸು ಬಾಯಾರು, ಶಾನ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.