HEALTH TIPS

ಕರ್ನಾಟಕದಲ್ಲಿ ನೈಟ್ ಕಫ್ರ್ಯೂ ಜಾರಿ : ಸಿಎಂ ಯಡಿಯೂರಪ್ಪ

        ಬೆಂಗಳೂರು: ಹೊಸ ಬಗೆಯ ಕೊರೊನಾ ವೈರಸ್ ಹರಡುತ್ತಿರುವ ಕಾರಣದಿಂದ ಕರ್ನಾಟಕ ರಾಜ್ಯದಲ್ಲಿ ಬುಧವಾರದಿಂದ ಜನವರಿ 2ರವರೆಗೆ ರಾತ್ರಿ ಕಫ್ರ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.

         ಬುಧವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಕಫ್ರ್ಯೂ ಜಾರಿಯಲ್ಲಿರುತ್ತದೆ. ಬುಧವಾರ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ' ಎಂದರು.

        ವಿದೇಶಗಳಿಂದ ರಾಜ್ಯಕ್ಕೆ ಬರುವವರು ಆರ್ ಟಿ-ಪಿಸಿಆರ್ ವಿಧಾನದಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿ ಹೊಂದಿರಬೇಕು. ಹೊರಗೆ ಓಡಾಡುವಾಗ 72 ಗಂಟೆಗಳ ಅವಧಿಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯ ಎಂದರು.

             ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries