ಕಾಸರಗೋಡು: ಕರ್ನಾಟಕ ಸರ್ಕಾರದ ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿಗೆ ಪಾತ್ರರಾದ ಗಡಿನಾಡಿನ ಹಿರಿಯ ಸಾಹಿತಿ, ಭಾಷಾಂತರಕಾರ ಎ.ನರಸಿಂಹ ಭಟ್ ಅವರನ್ನು ಅವರ ಸ್ವಗೃಹದಲ್ಲಿ ಗುರುವಾರ ಸಂಜೆ ಅಭಿನಂದಿಸಲಾಯಿತು.
ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದ್ದರು. ಕವಿ, ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಅಭಿನಂದನ ಭಾಷಣ ಮಾಡಿದರು. ಸಾಂಸ್ಕøತಿಕ ಭವನ ಸಮಿತಿಯ ಆಶ್ರಯದಲ್ಲಿ ಅಭಿನಂದನ ಸಮಾರಂಭ ಜರಗಿತು.
ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹರಿದಾಸ್ ಜಯಾನಂದ ಕುಮಾರ್ ಹೊಸದುರ್ಗ ಭಕ್ತಿಗೀತೆಗಳನ್ನು, ದಿವಾಕರ ಪಿ.ಅಶೋಕನಗರ ಭಾವಗೀತೆಗಳನ್ನು ಹಾಡಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.