ಮೆಹ್ರೌಲಿ(ನವದೆಹಲಿ): ಕೇಂದ್ರ ಸರ್ಕಾರ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳು ರೈತರ ಪರವಾಗಿದೆ. ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ವ್ಯವಸ್ಥೆಯನ್ನು ಅಥವಾ ರೈತರ ಜಮೀನುಗಳನ್ನು ಅವರಿಂದ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ. ಸರ್ಕಾರ ರೈತ ಸಂಘಟನೆಗಳ ಜೊತೆ ಮುಕ್ತ ಮನಸ್ಸಿನಿಂದ ಮಾತುಕತೆಗೆ ಸಿದ್ದವಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ದೆಹಲಿಯ ಮೆಹ್ರೌಲಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಕನಿಷ್ಠ ಬೆಂಬಲ ಬೆಲೆ ವಿಚಾರದಲ್ಲಿ ರೈತರ ಹಾದಿ ತಪ್ಪಿಸುತ್ತಿದೆ. ಕನಿಷ್ಠ ಬೆಂಬಲ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ ಎಂದು ನಾನು ಈ ಸಂದರ್ಭದಲ್ಲಿ ರೈತ ಬಾಂಧವರಿಗೆ ಖಾತರಿಪಡಿಸುತ್ತಿದ್ದೇನೆ ಎಂದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ದೇಶದ 9 ಕೋಟಿಗೂ ಅಧಿಕ ರೈತರಿಗೆ ಇಂದು ಪ್ರಧಾನಿ ಮುಂದಿನ ಕಂತಿನ 18 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಅವರು ನಿಜವಾಗಿಯೂ ರೈತರ ಉದ್ಧಾರಕ್ಕಾಗಿ ಕೆಲಸ ಮಾಡುತ್ತಿರುವ ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಶ್ಲಾಘಿಸಿದರು.