ಬೆಂಗಳೂರು: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿನೀಶ್ ಕೊಡಿಯೇರಿಯ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ. ಬೆಂಗಳೂರು ಸೆಷನ್ಸ್ ನ್ಯಾಯಾಲಯ ಬುಧವಾರ ಈ ಕ್ರಮ ಕೈಗೊಂಡಿದೆ.
ಇಡಿ ಬಂಧನ ಕಾನೂನುಬಾಹಿರ ಎಂದು ಆರೋಪಿಸಿ ಬಿನೀಶ್ ಪರ ವಕೀಲರು ಕರ್ನಾಟಕ ಹೈಕೋರ್ಟ್‍ಗೆ ಸೋಮವಾರ ಅರ್ಜಿ ಸಲ್ಲಿಸಿದ್ದರು. ಹೆಚ್ಚುವರಿ ಸಾಲಿಸಿಟರ್ ಜನರಲ್ ನಿನ್ನೆ ಇಡಿ ಪರವಾಗಿ ಹಾಜರಾಗಿದ್ದರು.