ನವದೆಹಲಿ: ಕೃಷಿ ಕಾನೂನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿರುವ ದಿಢೀರ್ ಸಭೆ ತೀವ್ರ ಕುತೂಹಲ ಕೆರಳಿಸಿದೆ.ಇ
ಇದೇ ವೇಳೆ ಅತ್ತ ದೆಹಲಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿರುವಂತೆಯೇ ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಮಾತುಕತೆ ಅಥವಾ ಸಂಧಾನಸಭೆ ಕೂಡ ಮುಂದುವರೆದಿದೆ. ಇದರ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾರೊಂದಿಗೆ ಚರ್ಚೆ ನಡೆಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ರೈತರ ಪ್ರತಿಭಟನೆಯಿಂದಾಗಿ ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ಹಿಂದಕ್ಕೆ ಪಡೆಯಲು ಅಥವಾ ತಿದ್ದುಪಡಿಗೆ ಮುಂದಾಗಿದೆಯೇ ಎಂಬ ಅನುಮಾನ ಕಾಡತೊಡಗಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ವಿಶೇಷ ಸಂಸತ್ ಅಧಿವೇಶನ ನಡೆಸುವ ಸಂಬಂಥ ಸ್ಪೀಕರ್ ಓಂ ಬಿರ್ಲಾರೊಂದಿಗೆ ಚರ್ಚೆ ನಡೆಸುತ್ತಿದೆಯೇ ಎಂಬ ಅನುಮಾನ ಹುಟ್ಟುಕೊಂಡಿದೆ. ಅಲ್ಲದೆ ಈ ಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಲ್ಗೊಂಡಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.
ವದಂತಿ ತಳ್ಳಿ ಹಾಕಿದ ಅಧಿಕಾರಿಗಳು: ಪ್ರಧಾನಿ ಮೋದಿ ಮತ್ತು ಸ್ಪೀಕರ್ ಓಂ ಬಿರ್ಲಾ ಅವರ ಸಭೆ ಕುರಿತಂತೆ ಎದ್ದಿರುವ ಊಹಾಪೋಹಗಳನ್ನು ಲೋಕಸಭಾ ಅಧಿಕಾರಿಗಳು ತಳ್ಳಿಹಾಕಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು ನೂತನ ಸಂಸತ್ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನ ಮಾಡಲು ಆಗಮಿಸಿದ್ದಾರೆ ಎಂದು ಹೇಳಿದರ.