ಕಾಸರಗೋಡು: ಕೇಂದ್ರ ಸರ್ಕಾರ ಜಾರಿಗೆ ತಮದಿರುವ ಕೃಷಿ ಕಾನೂನು ವಿರೋಧಿಸಿ ಕೃಷಿಕ ಸಂಘಟನೆಗಳು ಮಂಗಳವಾರ ಆಯೋಜಿಸಿದ್ದ ಭಾರತ ಬಂದ್ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಪ್ರತಿಭಟನೆ ನಡೆಯಿತು. ಕೇರಳದಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲಾಗಿದ್ದು, ಬಂದ್‍ಗೆ ಬೆಂಬಲ ಸಊಚಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಸಂಯುಕ್ತ ಮುಷ್ಕರ ಸಮಿತಿ ವತಿಯಿಂದ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಟಿ.ಕೆ ರಾಜನ್ ಉದ್ಘಾಟಿಸಿದರು. ಕರಿವೆಳ್ಳೂರ್ ವಿಜಯನ್ ಅಧ್ಯಕ್ಷತೆ ವಹಿಸಿದ್ದರು. ಸಂಯುಕತ ಮುಷ್ಕರ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.