ತಿರುವನಂತಪುರ: ವಿಧಾನಸಭಾ ಚುನಾವಣೆಯನ್ನು ಎರಡು ಹಂತಗಳಲ್ಲಿ ನಡೆಸುವ ಪ್ರಸ್ತಾಪವನ್ನು ಚುನಾವಣಾ ಆಯೋಗ ಪರಿಗಣಿಸುತ್ತಿದೆ. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಟೀಕಾರಂ ಮೀನಾ ಮತ್ತು ಉನ್ನತ ಅಧಿಕಾರಿಗಳ ನಡುವಿನ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ಹೆಚ್ಚಿನ ಚರ್ಚೆಗಾಗಿ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಜನವರಿ ಮೊದಲ ವಾರದಲ್ಲಿ ಕೇರಳಕ್ಕೆ ಆಗಮಿಸಲಿದ್ದಾರೆ. ಕೋವಿಡ್ ವ್ಯಾಪಕತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳ ಕೊರತೆ ಇದೆ ಎಂದು ಜಿಲ್ಲಾಧಿಕಾರಿಗಳು ಮುಖ್ಯ ಚುನಾವಣಾ ಅಧಿಕಾರಿಗೆ ಈಗಾಗಲೇ ಮಾಹಿತಿ ನೀಡಿದ್ದಾರೆ. ಇದರಿಂದ ಚುನಾವಣಾ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ನಡೆಸುವುದರಿಂದ ಸುಗಮವಾಗಿ ಪೂರ್ಣಗೊಳಿಸಬಹುದು ಎಂದು ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗದ ಅಧಿಕಾರಿಗಳು ರಾಜಕೀಯ ಪಕ್ಷದ ಮುಖಂಡರನ್ನು ಭೇಟಿ ಮಾಡಲಿದ್ದಾರೆ. 2011 ಮತ್ತು 2016 ರ ವಿಧಾನಸಭಾ ಚುನಾವಣೆಗಳು ಒಂದೇ ಹಂತದಲ್ಲಿ ನಡೆದಿದ್ದರೆ, ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮೂರು ಹಂತಗಳಲ್ಲಿ ನಡೆದಿದ್ದವು.