HEALTH TIPS

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬ್ರೇಕ್? ಅನಾರೋಗ್ಯ ಕಾರಣ ಪಕ್ಷ ಆರಂಭಿಸುವುದಿಲ್ಲ ಎಂದ 'ತಲೈವಾ'!

           ಚೆನ್ನೈ   ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ.

         ಇದೇ 31ರಂದು ತಮ್ಮ ರಾಜಕೀಯ ಪಕ್ಷ ಸ್ಥಾಪನೆಯನ್ನು ಘೋಷಿಸುವ ಯೋಜನೆಯಲ್ಲಿ ರಜನಿಕಾಂತ್ ಅವರಿದ್ದರು. 'ಅನ್ನತ್ತೆ' ಚಿತ್ರದ ಶೂಟಿಂಗ್ಗೆಂದು ಹೈದರಾಬಾದ್ಗೆ ಹೋಗಿದ್ದ ರಜನಿಕಾಂತ್ ಅವರ ಚಿತ್ರತಂಡದ ಸದಸ್ಯರಲ್ಲಿ ಸೋಂಕು ಕಾಣಿಸಿಕೊಂಡು ಕ್ವಾರಂಟೈನ್ ಗೆ ಒಳಗಾಗಿದ್ದರು. ಅಲ್ಲಿ ಅವರಿಗೆ ತೀವ್ರ ರಕ್ತದೊತ್ತಡ ಮತ್ತು ಉಸಿರಾಟ ಸಮಸ್ಯೆಯುಂಟಾಗಿ ಮೊನ್ನೆ ಡಿಸೆಂಬರ್ 25ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ.


           ನಿನ್ನೆ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾದ ರಜನಿಕಾಂತ್ ಅವರಿಗೆ ವೈದ್ಯರು ಒಂದು ವಾರ ಕಾಲ ವಿಶ್ರಾಂತಿ ಸೂಚಿಸಿದ್ದಾರೆ. ಇಂದು ಟ್ವಿಟ್ಟರ್ ನಲ್ಲಿ ಹೇಳಿಕೆ ಪ್ರಕಟಿಸಿರುವ ರಜನಿಕಾಂತ್, ತಮ್ಮ ಅನಾರೋಗ್ಯ ಕಾರಣದಿಂದ ತಳಮಟ್ಟದಲ್ಲಿ ಕೆಲಸ ಮಾಡಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ, ಕೇವಲ ಸೋಷಿಯಲ್ ಮೀಡಿಯಾ ಮತ್ತು ವರ್ಚುವಲ್ ಮಾಧ್ಯಮ ಮೂಲಕವೇ ಸದ್ಯದ ಮಟ್ಟಿಗೆ ಸಾಧ್ಯ ಎಂದು ಪ್ರಕಟಿಸಿದ್ದಾರೆ.

             ನಾನು ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ, ಚುನಾವಣಾ ರಾಜಕೀಯಕ್ಕೆ ಸೇರ್ಪಡೆಯಾಗದೆ ನನ್ನಿಂದಾದ ಮಟ್ಟಿಗೆ ಜನರ ಸೇವೆ ಮಾಡುತ್ತೇನೆ ಎಂದು ರಜನಿಕಾಂತ್ ಇಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries