ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 29,398 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, 414 ಸೋಂಕಿತರು ಮೃತಪಟ್ಟಿದ್ದಾರೆ. ಹೀಗಾಗಿ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 97,96,770ಕ್ಕೆ ಏರಿಯಾಗಿದ್ದು, ಸಾವಿನ ಸಂಖ್ಯೆ 1,42,186ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಇಲಾಖೆ ತಿಳಿಸಿದೆ.
ಗುರುವಾರ 37,528 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿನಿಂದ ಒಟ್ಟು 92,90,834 ಮಂದಿ ಗುಣಮುಖರಾದಂತಾಗಿದೆ. ಉಳಿದಂತೆ ಇನ್ನೂ 3,63,749 ಸಕ್ರಿಯ ಪ್ರಕರಣಗಳಿವೆ.
ಐಸಿಎಂಆರ್ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 8,72,497 ಜನರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ ಒಟ್ಟು 15,16,32,223 ಮಾದರಿ ಪರೀಕ್ಷೆ ನಡೆಸಲಾಗಿದೆ.
ಸದ್ಯ ಮಹಾರಾಷ್ಟ್ರದಲ್ಲಿ 73,001 ಸಕ್ರಿಯ ಪ್ರಕರಣಗಳಿವೆ. ಕೇರಳದಲ್ಲಿ 59,663, ಕರ್ನಾಟಕದಲ್ಲಿ 19,225, ದೆಹಲಿಯಲ್ಲಿ 18,753, ಪಶ್ಚಿಮ ಬಂಗಾಳದಲ್ಲಿ 23,451 ಹಾಗೂ ಉತ್ತರ ಪ್ರದೇಶದಲ್ಲಿ 20,801 ಸಕ್ರಿಯ ಪ್ರಕರಣಗಳಿವೆ.