ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹುಣಸೋಡು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ಸ್ಥಳದಲ್ಲಿ ಸಂಭವಿಸಿದ ಭಾರೀ ಅವಘಡದಲ್ಲಿ 10-15 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಶಿವಮೊಗ್ಗದಲ್ಲಿ ಸಂಭವಿಸಿರುವ ಸ್ಫೋಟ ಘಟನಯಲ್ಲಿ ಹಲವಾರು ಜೀವ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಎಲ್ಲಾ ರೀತಿ ಪರಿಹಾರಗಳನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಪ್ರಧಾನಿ ಮೋದಿಯವರು ಹೇಳಿದ್ದಾರೆ.
ಮಲೆನಾಡಿನಲ್ಲಿ ಕೇಳಿದ ಭಾರೀ ಶಬ್ಧಕ್ಕೆ ಇದೇ ಕಾರಣ ಎಂದು ಹೇಳಲಾಗುತ್ತಿದೆ. ಲಾರಿಯೊಂದಕ್ಕೆ ತುಂಬಿದ್ದ ಜೆಲಿಟಿನ್ ಸ್ಫೋಟಗೊಂಡು ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಪಷ್ಟ ಚಿತ್ರಣಗಳು ಇನ್ನಷ್ಟೇ ಸಿಗಬೇಕಿದೆ.
ಶಿವಮೊಗ್ಗ ಸುತ್ತಮುದ್ದ ಭಾರಿ ಪ್ರಮಾಣದಲ್ಲಿ ಅಕ್ರಮ ಗಣಿಗಾರಿಗೆ ನಡೆಯುತ್ತಿದ್ದು, ಇದರ ಒಂದು ಭಾಗವಾಯಿಯೇ ಈ ದುರಂತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ಸ್ಫೋಟದಿಂದಾಗಿಯೇ ಭಾರೀ ಬೆಳಕು ಮತ್ತು ಶಬ್ದ ಬಂದಿದೆ ಎಂದು ಇದೀಗ ಊಹಿಸಲಾಗುತ್ತಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಶಿವಮೊಗ್ಗ ಕೇಂದ್ರವಾಗಿರಿಸಿಕೊಂಡು ಈ ಸ್ಫೋಟ ಸಂಭವಿಸಿತು. ಆದರೆ, ಆ ಬಳಿಕ ಈ ಸ್ಫೋಟದ ಮೂಲ ತಿಳಿಯಿತು. ಈ ಘಟನೆಯಲ್ಲಿ ಸುಮಾರು 10-15 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ. ಘಟನೆ ನಡೆದ ಸ್ಥಳದಲ್ಲಿ ಎಲ್ಲೆಂದs ರಲ್ಲಿ ಛಿದ್ರವಾದ ದೇಹದ ಚೂರುಗಳು ಕಾಣಿಸುತ್ತಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಸುತ್ತಮುತ್ತ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಕತ್ತಲು ಅವರಿಸಿದೆ. ಶಿವಮೊಗ್ಗ ಸುತ್ತಮುಕ್ಕ ಅಕ್ರಮ ಗಲ್ಲು ಗಣಿಗಾರಿಕೆ ಸಾಕಷ್ಟು ಪ್ರಮಾಣದಲ್ಲಿ ನಡೆಯುತ್ತಿದ್ದು, ಕೆಲವೊಮ್ಮೆ ದಾಳಿ ಕೂಡ ನಡೆದಿತ್ತು. ಆದರೂ ಇದನ್ನು ಮೀರಿ ಈ ರೀತಿಯ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ಸ್ಥಳೀಯರು ಬದಲಾಗಿ ಬಿಹಾರಿ ಕಾರ್ಮಿಕರನ್ನೇ ಹೆಚ್ಚಾಗಿ ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಹೀಗಾಗಿ ಈ ಘಟನೆಯಲ್ಲಿ ಮೃತಪಟ್ಟವರಲ್ಲಿ ಬಿಹಾರಿ ಕಾರ್ಮಿಕರೇ ಹೆಚ್ಚಾಗಿದ್ದಾರೆಂದು ಹೇಳಲಾಗುತ್ತಿದೆ. ಇದೀಗ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.