ನವದೆಹಲಿ: ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಮಹಾಮಾರಿ ಕೊರೋನಾ ವೈರಸ್ ಇಳಿಮುಖದ ಹಾದಿ ಭಾರತದಲ್ಲಿ ಮುಂದುವರೆದಿದ್ದು, ದೇಶದಲ್ಲಿಂದು ಅತ್ಯಂತ ಕನಿಷ್ಟ 10,064 ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10,064 ಹೊಸ ಕೇಸ್ ಪತ್ತೆಯಾಗುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,05,81,837ಕ್ಕೆ ಏರಿಕೆಯಾಗಿದೆ.
ಒಟ್ಟಾರೆ 1,05,81,83 ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,411 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಈ ವರೆಗೂ ಬರೋಬ್ಬರಿ 1,02,28,753 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಸಾವಿನ ಸಂಖ್ಯೆ ಕಡಿಮೆ ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,00,528ಕ್ಕೆ ಇಳಿಕೆಯಾಗಿದೆ.
ಭಾರತದಲ್ಲಿ ಒಂದೇ ದಿನ 7,09,791 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,78,02,827 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.