ನವದೆಹಲಿ: ದೇಶದಲ್ಲಿ ರೂಪಾಂತರಗೊಂಡ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಬುಧವಾರ ಸೋಂಕಿತರ ಸಂಖ್ಯೆ 102ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಜನವರಿ 11ರ ತನಕ 96 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣು ಪತ್ತೆಯಾಗಿತ್ತು. ಆದರೆ ಇದೀಗ ಸೋಂಕಿತರ ಸಂಖ್ಯೆ 102ಕ್ಕೆ ಹೆಚ್ಚಿದೆ ಎಂದು ಸಚಿವಾಲಯವು ಹೇಳಿದೆ.
ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ. ಅಲ್ಲದೆ ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.