ಜಲ್ಪೈಗುರಿ(ಪಶ್ಚಿಮ ಬಂಗಾಳ): ಮತ್ತೊಂದು ತೀವ್ರ ಅಪಘಾತ ಕಳೆದ ರಾತ್ರಿ ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯಲ್ಲಿ ಸಂಭವಿಸಿದೆ.
ಜಿಲ್ಲೆಯ ಧುಪ್ಗುರಿ ನಗರದಲ್ಲಿ ಕಳೆದ ರಾತ್ರಿ ಸಂಭವಿಸಿದ ತೀವ್ರ ಮಟ್ಟದ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದೆ ಈ ಅಪಘಾತ ಸಂಭವಿಸಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.