ಚೆನ್ನೈ: ಇನ್ನು ಕೆಲವೇ ದಿನಗಳಲ್ಲಿ ದೇಶದ ಪ್ರತೀ ನಾಗರೀಕನಿಗೂ ಕೊರೋನಾ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಶುಕ್ರವಾರ ಹೇಳಿದ್ದಾರೆ.
ದೇಶದಾದ್ಯಂತ ಇಂದು 2ನೇ ಸುತ್ತಿನ ಲಸಿಕೆ ತಾಲೀಮು ಕಾರ್ಯಕ್ರಮ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಚಿವ ಹರ್ಷವರ್ಧನ್ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯಂತ ಕಡಿಮೆ ಅವಧಿಯಲ್ಲಿ ಲಸಿಕೆ ಅಭಿವೃದ್ಧಿಯಲ್ಲಿ ಭಾರತ ಉತ್ತಮ ಕಾರ್ಯ ಸಾಧಿಸಿದೆ. ಇನ್ನು ಕಳವೇ ದಿನಗಳಲ್ಲಿ ದೇಶದ ಪ್ರತೀ ನಾಗರೀಕರನಿಗೂ ಲಸಿಕೆ ವಿತರಣೆ ಮಾಡಲಾಗುತ್ತದೆ. ಲಸಿಕೆ ಲಭ್ಯವಾಗುತ್ತಿದ್ದಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಲಸಿಕೆ ಕುರಿತು ಯಾವುದೇ ಮಾಹಿತಿಯನ್ನು ಸರ್ಕಾರ ತಳಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೂ ಜನರಿಗೆ ನೀಡಲಿದೆ. ಲಸಿಕೆ ತಾಲೀಮು ಮೂಲಕ ಲಕ್ಷಾಂತರ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗಿದೆ. ಪ್ರಕ್ರಿಯೆಗಳು ಇನ್ನೂ ಮುಂದುವರೆದಿವೆ ಎಂದು ತಿಳಿಸಿದ್ದಾರೆ.
ದೇಶದಾದ್ಯಂತ ಜನವರಿ 17ರಿಂದ 3 ದಿನ ಪಲ್ಸ್ ಪೋಲಿಯೋ ಲಸಿಕೆ
ದೇಶದಾದ್ಯಂದ ಜನವರಿ 17 ರಿಂದ 3 ದಿನಗಳ ಕಾಲ ಪಲ್ ಪೋಲಿಯೋ ಲಸಿಕೆ ನೀಡಲಾಗುತ್ತದೆ ಎಂದು ಸಚಿವ ಹರ್ಷವರ್ಧನ್ ಅವರು ಶುಕ್ರವಾರ ಹೇಳಿದ್ದಾರೆ.
ಜನವರಿ 17 ರಿಂದ ಪೊಲೀಯೋ ಲಸಿಕೆ ಕಾರ್ಯಕ್ರಮ ಆರಂಭವಾಗಲಿದೆ. ಪ್ರಸ್ತುತ ಸಮಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವುದು ಅತ್ಯಂತ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ.