ತಿರುವನಂತಪುರ: ರಾಜ್ಯದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ದಿನಾಂಕವನ್ನು ಮುಂದೂಡಲಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಾಜಾ ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಪೋಲಿಯೊ ನಿರ್ಮೂಲನೆ ಕಾರ್ಯಕ್ರಮದ ಅಂಗವಾಗಿ ಪಲ್ಸ್ ಪೋಲಿಯೊ ರೋಗನಿರೋಧಕ ಕಾರ್ಯಕ್ರಮವನ್ನು ಜನವರಿ 17 ರಂದು ರಾಜ್ಯದಲ್ಲಿ ನಿರ್ಧರಿಸಲಾಗಿತ್ತು. ಆದರೆ, ಕೋವಿಡ್ ಲಸಿಕೆ ವಿತರಿಸುತ್ತಿರುವುದರಿಂದ ಪೋಲಿಯೊ ಲಸಿಕೆ ವಿತರಣೆಯನ್ನು ಮುಂದೂಡಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯ ಸರ್ಕಾರವನ್ನು ಕೋರಿತ್ತು. ಪರಿಷ್ಕøತ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.