ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,968 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,04,95,147ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಒಂದೇ ದಿನ ಮಹಾಮಾರಿ ವೈರಸ್ 202 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,51,529ಕ್ಕೆ ಏರಿಕೆಯಾಗಿದೆ.ಈ
ನಡುವೆ ಒಟ್ಟಾರೆ 1,04,95,147 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 17,817 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,01,29,111 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 2,14,507 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಭಾರತದಲ್ಲಿ ಒಂದೇ ದಿನ 8,36,227 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 18,34,89,114 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.