ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,139 ಹೊಸ ಕೇಸ್ ಪತ್ತೆಯಾಗಿದ್ದು, ಸಕ್ರಿಯ ಕೋವಿಡ್-19 ಪ್ರಕರಣಗಳ ಸಂಖ್ಯೆ 2,25,449 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 40 ದಿನಗಳಿಂದ ದೇಶದಲ್ಲಿ ಹೊಸದಾಗಿ ಧೃಢಪಟ್ಟ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ.
ಹೊಸ ಪ್ರಕರಣಗಳನ್ನು ಮೀರಿ ಚೇತರಿಕೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಮತ್ತು ದೈನಂದಿನ ಸಾವಿನ ಪ್ರಮಾಣ ಇಳಿಕೆಯಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಂಡುಬರುತ್ತಿದೆ.
ಕಳೆದ 24 ಗಂಟೆಗಳಲ್ಲಿ 18,139 ಮಂದಿ ಸೋಂಕಿನಿಂದ ಚೇತರಿಸಿಕೊಳ್ಳುವುದರೊಂದಿಗೆ ಒಟ್ಟು ಸೋಂಕಿತರ 1,04,13,417ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಹೊಸ 18,139 ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 20,539 ಮಂದಿ ಚೇತರಿಸಿಕೊಂಡಿದ್ದಾರೆ.
ಚೇತರಿಕೆ ಸಂಖ್ಯೆ ಹೆಚ್ಚಾಗುತ್ತಿರುವುದರೊಂದಿಗೆ ಶುಕ್ರವಾರ ಚೇತರಿಕೆ ಶೇ 96.16 ಕ್ಕೆ ಏರಿದೆ. ದೇಶದಲ್ಲಿ ಸದ್ಯ ಚೇತರಿಕೆ ಕಂಡ ಒಟ್ಟು ಪ್ರಕರಣಗಳ ಸಂಖ್ಯೆ 1,00,37,398ರಷ್ಟಿದೆ.
ಈ ನಡುವೆ ಸಾವಿನ ಸಂಖ್ಯೆ ಕೂಡ ಕಡಿಮೆಯಾಗತ್ತಿದ್ದು, ಒಂದೇ ದಿನ 234 ಮಂದಿ ಸಾವನ್ನಪ್ಪುವುದರೊಂದಿಗೆ ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 1,50,570ಕ್ಕೆ ಏರಿಕೆಯಾಗಿದೆ.