ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಆರ್ಭಟ ಇಳಿಯುತ್ತಿರುವ ಹಾದಿ ಮುಂದುವರೆದಿದ್ದು, ದೇಶದಲ್ಲಿ ಶನಿವಾರ 19,078 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿ 224 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,03,05,788ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 1,49,218ಕ್ಕೆ ತಲುಪಿದೆ.
ಒಟ್ಟಾರೆ 1,03,05,788 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 22,926 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈ ವರೆಗೂ ಗುಣಮುಖರಾದವರ ಸಂಖ್ಯೆ 99,06,387ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರಿಗಿಂತ ಗುಣಮುಖರಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣ ಸಂಖ್ಯೆ 2,50,183ಕ್ಕೆ ಇಳಿಕೆಯಾಗಿದೆ.