ಕಾಸರಗೋಡು: ಐ.ಇ.ಸಿ. ಸಂಚಲನ ಸಮಿತಿ ವತಿಯಿಂದ ನಿರ್ಮಿಸಿರುವ ಕೋವಿಡ್ 19 ಜಾಗೃತಿ ಸಾಕ್ಷ್ಯಚಿತ್ರ ಬಿಡುಗಡೆ ಮಂಗಳವಾರ ಜಿಲ್ಲಾಧಿಕಾರಿ ಕಚೇಋಇ ಕಿರು ಸಭಾಂಗಣದಲ್ಲಿ ಜರುಗಿತು.
ಕಂದಾಯ ಸಚಿವ ಇ.ಚಂದ್ರಶೇಖರನ್ ಬಿಡುಗಡೆಗೊಳಿಸಿದರು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು. ಐ.ಇ.ಸಿ. ಸಂಚಲನ ಸಮಿತಿ ಸಂಚಾಲಕ, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ., ಸದಸ್ಯ ಜಿಷೋ ಜೇಮ್ಸ್, ಸಾಕ್ಷ್ಯಚಿತ್ರದ ನಿರ್ದೇಶಕ ಗೋಪಿ ಕುತ್ತಿಕೋಲು, ಹರಿತ ಕೇರಳಂ ಮಿಷನ್ ಜಿಲ್ಲಾ ಸಂಚಾಲಕ ಎಂ.ಪಿ.ಸುಬ್ರಹ್ಮಣ್ಯನ್, ಚಿತ್ರದಲ್ಲಿ ಅಭಿನಯಿಸಿದ ಮಕ್ಕಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರು ಅಧ್ಯಕ್ಷರಾಗಿರುವ ಐ.ಇ.ಸಿ. ಸಂಚಲನ ಸಮಿತಿಯ ಚಟುವಟಿಕೆಗಳ ಅಂಗವಾಗಿ ಡಿಜಿಟಲ್ ಪೆÇೀಸ್ಟರ್, ನೋಟೀಸು, ಟ್ರೋಲ್, ಸಾಕ್ಷ್ಯಚಿತ್ರ, ಕಿರುಚಿತ್ರಗಳು ಇತ್ಯಾದಿ ಪ್ರತಿರೋಧ ಚಟುವಟಿಕೆಗಳು, ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ.