ಕಾಸರಗೋಡು: ಕಾಸರಗೋಡು ಜಿಲ್ಲಾ ಗ್ರಂಥಾಲಯ ಮಂಡಳಿ ಅಭಿವೃದ್ಧಿ ಸಮಿತಿ ವತಿಯಿಂದ ಕಾಞಂಗಾಡ್ ಅಲಾಮಿಪಳ್ಳಿ ನೂತನ ಬಸ್ ನಿಲ್ದಾಣದಲ್ಲಿ ಪುಸ್ತಕೋತ್ಸವ ಜ.20,21,22ರಂದು ನಡೆಯಲಿದೆ.
35 ಪ್ರಕಾಶನ ಸಂಸ್ಥೆಗಳ 61 ಪುಸ್ತಕಗಳ ಸ್ಟಾಲ್ ಗಳು ಇಲ್ಲಿರುವುವು. ಜ.20ರಂದು ಬೆಳಗ್ಗೆ 10 ಗಂಟೆಗೆ ಇಲ್ಲಿ ನಡೆಯುವ ಸಮಾರಂಭದಲ್ಲಿ ಕಾಞಂಗಾಡ್ ನಗರಸಭೆಯ ಅಧ್ಯಕ್ಷೆ ಕೆ.ವಿ.ಸುಜಾತಾ ಪುಸ್ತಕೋತ್ಸವವನ್ನು ಉದ್ಘಾಟಿಸುವರು. ಜಿಲ್ಲಾ ಗ್ರಂಥಾಲಯ ಮಂಡಳಿ ಅಧ್ಯಕ್ಷ ಕೆ.ವಿ.ಕುಂಞÂ ರಾಮನ್ ಅಧ್ಯಕ್ಷತೆ ವಹಿಸುವರು.