HEALTH TIPS

ಫೆ.28ರವರೆಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನ ಸಂಚಾರಕ್ಕೆ ನಿರ್ಬಂಧ

           ನವದೆಹಲಿ: ಸಾಂಕ್ರಾಮಿಕ ಪಿಡುಗು ಕೊರೊನಾವೈರಸ್ ನಿಯಂತ್ರಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ ಮೇಲಿನ ನಿರ್ಬಂಧವನ್ನು ಫೆಬ್ರವರಿ.28ರವರೆಗೂ ವಿಸ್ತರಿಸಲಾಗಿದೆ ಎಂದು ಭಾರತೀಯ ವಿಮಾನಯಾನ ಸಚಿವಾಲಯ ತಿಳಿಸಿದೆ.

          ಇದರ ನಡುವೆಯೂ ತುರ್ತು ಸಂದರ್ಭಗಳಲ್ಲಿ ಬಬಲ್ ವ್ಯವಸ್ಥೆ ಅಡಿಯಲ್ಲಿ ವಿದೇಶಕ್ಕೆ ಪ್ರಯಾಣಿಸುವುದಕ್ಕೆ ಅವಕಾಶ ನೀಡಲಾಗುತ್ತಿದೆ. ಅಂತಾರಾಷ್ಟ್ರೀಯ ಆಲ್-ಕಾರ್ಗೋ ಕಾರ್ಯಾಚರಣೆ ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಈ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

           ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆ ಮೊದಲ ಬಾರಿಗೆ 2020ರ ಮಾರ್ಚ್ ತಿಂಗಳಿನಲ್ಲಿ ಭಾರತೀಯ ಕೇಂದ್ರ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಿತ್ತು.

                              ಇಂಗ್ಲೆಂಡ್ ದೇಶಕ್ಕೆ ವಿಮಾನ ಸಂಚಾರ ನಿರ್ಬಂಧ:

       ಬುಧವಾರವಷ್ಟೇ ಇಂಗ್ಲೆಂಡ್ ನಿಂದ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ಫೆಬ್ರವರಿ.14ರವರೆಗೂ ವಿಸ್ತರಿಸಿ ಆದೇಶಿಸಲಾಗಿತ್ತು. ಬ್ರಿಟಿಷ್ ವಿಮಾನಯಾನ, ವರ್ಜಿನ್ ಅಟ್ಲಾಂಟಿಕಾ ವಿಮಾನಯಾನ ಮತ್ತು ಭಾರತದ ಸಹಕಾರಿ ವಿಮಾನಯಾನ ಸಚಿವಾಲಯವು ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿತ್ತು.

       ಉಭಯ ರಾಷ್ಟ್ರಗಳ ನಡುವೆ ವಾರದಲ್ಲಿ 30 ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಈ ಪೈಕಿ 15 ವಿಮಾನಗಳು ಭಾರತದಿಂದ ಇಂಗ್ಲೆಂಡ್ ಗೆ ತೆರಳಿದರೆ, 15 ವಿಮಾನಗಳು ಇಂಗ್ಲೆಂಡ್ ನಿಂದ ಭಾರತಕ್ಕೆ ಸಂಚರಿಸಲಿವೆ. ಪ್ರಸ್ತುತ ದೆಹಲಿ, ಮುಂಬೈ, ಹೈದ್ರಾಬಾದ್ ಮತ್ತು ಬೆಂಗಳೂರಿನಿಂದ ಮಾತ್ರ ಇಂಗ್ಲೆಂಡ್ ಗೆ ಅಂತಾರಾಷ್ಟ್ರೀಯ ವಿಮಾನಗಳು ಸಂಚರಿಸುವುದಕ್ಕೆ ಅವಕಾಶ ನೀಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries