HEALTH TIPS

ಜನವರಿ 29ರಿಂದ ಬಜೆಟ್ ಅಧಿವೇಶನ ಪ್ರಾರಂಭಕ್ಕೆ ಸಿಸಿಪಿಎ ಶಿಫಾರಸು: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ

      ನವದೆಹಲಿ: ಇದೇ ಜನವರಿ 29ರಿಂದ ಸಂಸತ್ತಿನ ಬಜೆಟ್ ಅಧಿವೇಶನ ನಡೆಸಬೇಕೆಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಪಿಎ) ಶಿಫಾರಸು ಮಾಡಿದೆ. ಈ ವೇಳೆ ಕೇಂದ್ರ ಬಜೆಟ್ 2021-22 ಅನ್ನು ಫೆಬ್ರವರಿ 1 ರಂದು ಮಂಡಿಸಲಾಗುವುದು ಎಂದು ಮೂಲಗಳು ಹೇಳಿವೆ.

       ಕೋವಿಡ್ -19 ಸಾಂಕ್ರಾಮಿಕ ರೋಗದ ಕಾರಣ ಆರ್ಥಿಕತೆ ದೊಡ್ಡ ಸಂಕಷ್ಟಕ್ಕೆ ಸಿಕ್ಕು ವರ್ಷದ ನಂತರ ಇದು ಎನ್‌ಡಿಎ ಸರ್ಕಾರದ ಮೊದಲ ಬಜೆಟ್ ಆಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗಾಗಲೇ ಉದ್ಯಮ ವಲಯದ ಮುಖ್ಯಸ್ಥರೊಡನೆ ಬಜೆಟ್ ಪೂರ್ವ ಸಮಾಲೋಚನೆಗಳನ್ನು ಮುಕ್ತಾಯಗೊಳಿಸಿದ್ದಾರೆ ಮತ್ತು ಬಜೆಟ್ ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.

      ಬಜೆಟ್ ಮೊದಲು, ಹಣಕಾಸು ಸಚಿವಾಲಯವು 'ಹಲ್ವಾ ಸಮಾರಂಭ'ವನ್ನು ಸಹ ಆಯೋಜಿಸುತ್ತದೆ, ಇದು ಬಜೆಟ್ ಕಾಗದದ ದಾಖಲೆಗಳನ್ನು ಮುದ್ರಿಸುವ ಪ್ರಕ್ರಿಯೆಯನ್ನು ಸೂಚಿಸುತ್ತದೆ. ಮುಖ್ಯ ಆರ್ಥಿಕ ಸಲಹೆಗಾರರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ವಾರ್ಷಿಕ ಪ್ರಮುಖ ದಾಖಲೆಯಾದ ಬಜೆಟ್ ಮೊದಲು ಆರ್ಥಿಕ ಸಮೀಕ್ಷೆಯನ್ನು ಸಚಿವಾಲಯ ಬಿಡುಗಡೆ ಮಾಡುತ್ತದೆ.

       ಬಜೆಟ್ ಅಧಿವೇಶನದ ಮೊದಲ ಭಾಗವನ್ನು ಜನವರಿ 29 ರಿಂದ ಫೆಬ್ರವರಿ 15 ರವರೆಗೆ ನಡೆಸಬೇಕೆಂದು ಸಿಸಿಪಿಎ ಶಿಫಾರಸು ಮಾಡಿದ್ದು ಎರಡನೇ ಭಾಗವನ್ನು ಮಾರ್ಚ್ 8 ರಿಂದ ಏಪ್ರಿಲ್ 8 ರವರೆಗೆ ನಡೆಸಬಹುದೆಂದು ಹೇಳಿದೆ.

        ಸಿಸಿಪಿಎ ಶಿಫಾರಸ್ಸಿನ ಪ್ರಕಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 29 ರಂದು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries