ನವದೆಹಲಿ: ಸೂಕ್ಷ್ಮ ವಲಯಗಳನ್ನು ಹೊರತುಪಡಿಸಿ ದೇಶದ ಇತರ ಭಾಗಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನವರಿ 31ರ ಹೊತ್ತಿಗೆ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಲ್ಲಿ ಸ್ಥಗಿತಗೊಂಡ ಅಂಗನವಾಡಿಗಳ ಕಾರ್ಯನಿರ್ವಹಣೆ ಇನ್ನೂ ಆರಂಭಗೊಂಡಿಲ್ಲ. ಈ ತಿಂಗಳ ಆರಂಭದಲ್ಲಿ ಶಾಲಾ ಕಾಲೇಜುಗಳು ಬಹುತೇಕ ಆರಂಭಗೊಂಡಿದ್ದು, ಉಳಿದೆಲ್ಲಾ ಚಟುವಟಿಕೆಗಳು ಸಹ ಆರಂಭಗೊಂಡಿವೆ.
6 ವರ್ಷದ ಮಗುವಿನ ಸರ್ವತೋಮುಖ ಬೆಳವಣಿಗೆಗಾಗಿ ಇರುವ ಅಂಗನವಾಡಿ ಕೇಂದ್ರಗಳನ್ನು ಮತ್ತೆ ಆರಂಭಿಸಿ ಮಕ್ಕಳನ್ನು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದೇ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಗರ್ಭಿಣಿಯರಿಗೆ, ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವ ತಾಯಿ-ಮಗುವಿಗೆ ಪೂರಕ ಆಹಾರವನ್ನು ಒದಗಿಸುವಂತೆ ಕೂಡ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ಸಂಪೂರ್ಣ ಪರಿಹಾರ ನಿರ್ವಹಣೆಯನ್ನು ಅಂಗನವಾಡಿ ಕೇಂದ್ರಗಳಲ್ಲಿ ಜಾರಿಗೆ ತರಬೇಕು ಎಂದು ಕೂಡ ಸುಪ್ರೀಂ ಕೋರ್ಟ್ ಸೂಚಿಸಿದೆ.