ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ದದ 4ನೇ ಮತ್ತು ಅಂತಿಮ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ಪ್ರಬಲ ಆಸ್ಟ್ರೇಲಿಯಾ ತಂಡವನ್ನು 3 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೆಸ್ಟ್ ಸರಣಿಯನ್ನು ಕೈ ವಶ ಮಾಡಿಕೊಂಡಿದೆ.
ಬ್ರಿಸ್ಬೇನ್ ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 3 ವಿಕೆಟ್‌ಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ತಂಡ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 2–1 ಅಂತರದಿಂದ ಕೈ ವಶ ಮಾಡಿಕೊಂಡಿದೆ. ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಗುರಿಯನ್ನು ಭಾರತ ತಂಡ 7 ವಿಕೆಟ್ ಕಳೆದುಕೊಂಡು ಮೆಟ್ಟಿ ನಿಂತು ಗೆದ್ದು ಬೀಗಿತು.