ನವದೆಹಲಿ: ದೇಶದಲ್ಲಿ ತೀವ್ರ ಗತಿಯಲ್ಲಿ ಕೊರೋನಾವೈರಸ್ ಪ್ರಕರಣಗಳು ಇಳಿಕೆಯಾಗುತ್ತಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.2 ಲಕ್ಷಕ್ಕಿಂತ ಕಡಿಮೆಯಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಮಾತ್ರ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳಿರುವುದಾಗಿ ತಿಳಿಸಿದರು.
ಶೇಕಡಾ 43. 96 ರಷ್ಟು ಕೋವಿಡ್-19 ರೋಗಿಗಳು ಆರೋಗ್ಯ ನಿಗಾವಣೆಯಲ್ಲಿದ್ದಾರೆ. ಶೇ. 56. 04 ರಷ್ಟು ಮಂದಿ ಮನೆ ಐಸೋಲೇಷನ್ ನಲ್ಲಿರುವುದಾಗಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಮಾಹಿತಿ ನೀಡಿದರು.
ವಿಶ್ವದಲ್ಲಿ ಕೋವಿಡ್ -19 ಪರಿಸ್ಥಿತಿ ಹದಗೆಟ್ಟಿದೆ. ದೇಶದಲ್ಲಿ ಪ್ರತಿದಿನ ಕಂಡುಬರುತ್ತಿದ್ದ ಕೊರೋನಾವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದರೂ, ಸಡಿಲತೆಯನ್ನು ತೋರಿಸಬಾರದು ಎಂದು ಅವರು ಹೇಳಿದರು.