ಮಂಜೇಶ್ವರ : ಭಾರತಾದ್ಯಂತ ಆಚರಿಸುತ್ತಿರುವ 72 ನೇ ಗಣರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಅನುಪಸ್ಥಿತಿಯಲ್ಲಿ ಸರಳವಾಗಿ ಆಚರಿಸಲಾಯಿತು.
ಕೋವಿಡ್ ಮಾನದಂಡಗಳನ್ನು ಅನುಸರಿಸಿಕೊಂಡು ಆಚರಿಸಿದ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ವಾರ್ಡಿನ ಪ್ರಥಮ ಪ್ರಜೆ, ಪಂಚಾಯತಿ ಸದಸ್ಯ ಜನಾರ್ಧನ ಪೂಜಾರಿಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೆÇಯ್ಯೆಲು, ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ಉಪಕಾರ್ಯದರ್ಶಿ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಹಾಗೂ ಸದಸ್ಯರಾದ ಹರಿರಾಮ ಕುಳೂರು, ರಫೀಕ್ ಪೆÇಯ್ಯೆಲು ಉಪಸ್ಥಿತರಿದ್ದರು. 'ಭಾರತದ ಅಖಂಡತೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್'ರವರ ಸಂವಿಧಾನವನ್ನು ಎತ್ತಿ ಹಿಡಿದು, ಎಲ್ಲರೂ ದೇಶವನ್ನು ಒಮ್ಮನಸ್ಸಿನಿಂದ ಮುನ್ನಡೆಸುವಂತಾಗಲಿ' ಎಂದು ಎಲ್ಲರೂ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ನೂತನವಾಗಿ ಮೀಂಜ ಪಂಚಾಯತಿಗೆ ಸದಸ್ಯರಾಗಿ ಆಯ್ಕೆಯಾದ ಶಾಲೆಯ ಇಬ್ಬರು ಹಳೆ ವಿದ್ಯಾರ್ಥಿಗಳಾದ ಜನಾರ್ಧನ ಪೂಜಾರಿ ಮತ್ತು ಬಾಬು ಸಿ ರವರಿಗೆ ಶಾಲೆಯ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಿಕ್ಷಕಿ ನಯನ ಎಂ ಸಹಕರಿಸಿದರು.