ನವದೆಹಲಿ: ಭಾರತದಲ್ಲಿ ಬ್ರಿಟನ್ ರೂಪಾಂತರಿ ಕೊರೋನಾ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಜ.6 ರಂದು ಸೋಂಕಿತರ ಸಂಖ್ಯೆ 73 ಇತ್ತು. ಕೇವಲ ಮೂರು ದಿನಗಳಲ್ಲಿ ಈ ಸಂಖ್ಯೆ 90ಕ್ಕೆ ಏರಿಕೆಯಾಗಿದೆ. ಎಲ್ಲಾ ಸೋಂಕಿತರನ್ನು ಆಯಾ ರಾಜ್ಯಗಳ ಆರೋಗ್ಯ ಕೇಂದ್ರಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಿ ಅವನ್ನೂ ಕ್ವಾರಂಟೈನ್ ಮಾಡಲಾಗಿದ್ದು, ವೈರಸ್ ನಿಗ್ರಹಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆಎಂದು ಸಚಿವಾಲಯ ತಿಳಿಸಿದೆ.