ಪೆರ್ಲ: ಕಾಟುಕುಕ್ಕೆ ಕೇಂದ್ರಿಕರಿಸಿರುವ 3,4,5ನೇ ವಾರ್ಡಿನ ಕಾಂಗ್ರೆಸ್ ಸಮಿತಿ ವತಿಯಿಂದ ಎಣ್ಮಕಜೆ ಪಂಚಾಯತಿ ನೂತನ ಆಡಳಿತ ಸಮಿತಿಗೆ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಅಭಿನಂದನಾ ಸಮಾರಂಭ ಕಾಟುಕುಕ್ಕೆ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇತ್ತೀಚೆಗೆ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಕಾಂಗ್ರೆಸ್ ನೇತಾರ ಮಿತ್ತೂರು ಪುರುಷೋತ್ತಮ ಭಟ್ ವಹಿಸಿದ್ದರು. ಮಾಜಿ ಜಿಲ್ಲಾ ಪಂ.ಸದಸ್ಯ ಸಿ.ಸಂಜೀವ ರೈ ಕಾರ್ಯಕ್ರಮ ಉದ್ಘಾಟಿಸಿದರು.
ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಜನಪ್ರತಿನಿಧಿಗಳನ್ನು ಅಭಿನಂದಿಸಿ ಮಾತನಾಡಿದರು. ಎಣ್ಮಕಜೆ ಗ್ರಾ.ಪಂ. ಅಧ್ಯಕ್ಷ ಸೋಮಶೇಖರ್ ಜೆ.ಎಸ್., ಗ್ರಾ.ಪಂ.ಉಪಾಧ್ಯಕ್ಷೆ ಡಾ.ಫಾತಿಮತ್ ಝಹನಾಜ್ ಹಂಸಾರ್, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಬಿ.ಎಸ್.ಗಾಂಭೀರ್, ಜಯಶ್ರೀ ಎ.ಕುಲಾಲ್, ಪಂ.ಸದಸ್ಯರಾದ ರಾಧಾಕೃಷ್ಣ ನಾಯಕ್ ಶೇಣಿ,ರಮ್ಲ ಇಬ್ರಾಹಿಂ, ಕುಸುಮಾವತಿ.ಬಿ, ಶೇರಿನಾ ಮುಸ್ತಾಫ ಅವರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಸಂಸದರಾಗಿ ಪ್ರಪ್ರಥಮ ಬಾರಿ ಶಾಲೆಗೆ ಆಗಮಿಸಿದ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರನ್ನು ಶಾಲಾ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿ ಹನೀಫ್ ಕಾಟುಕುಕ್ಕೆ ವಂದಿಸಿದರು.