HEALTH TIPS

ಕೊರೋನಾ ಎಫೆಕ್ಟ್: ಈ ಬಾರಿ ಗಣರಾಜ್ಯೋತ್ಸವಕ್ಕೆ ವಿದೇಶಿ ನೆಂಟರು ಬರೋಲ್ಲ- ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

       ನವದೆಹಲಿ: ಜಾಗತಿಕ  ಕಂಟಕ  ಮಹಾಮಾರಿ ಕೊರೋನಾ ವೈರಸ್ ಕಾರಣದಿಂದಾಗಿ ವಿದೇಶಿ ಮುಖ್ಯ ಅತಿಥಿಗಳ ಅನುಪಸ್ಥಿತಿಯಲ್ಲಿ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವ ನಡೆಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

       ಗಣರಾಜ್ಯೋತ್ಸವ ಸಿದ್ಧತೆ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ಅನುರಾಗ್ ಶ್ರೀವಾತ್ಸವ್ ಅವರು, ಮಾರಕ ಕೊರೋನಾ ವೈರಸ್ ಜಾಗತಿಕ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಯಾವುದೇ ವಿದೇಶಿ ಮುಖ್ಯ ಅತಿಥಿಗಳನ್ನು ಆಹ್ವಾನಿಸದಿರುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. 

      ಪ್ರತೀ ವರ್ಷದ ಗಣರಾಜ್ಯೋತ್ಸವಕ್ಕೆ ಯಾವುದೇ ದೇಶದ ಮುಖ್ಯಸ್ಥರೊಬ್ಬರನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಲಾಗುತ್ತದೆ. ಈ ಬಾರಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ, ಹೈಸ್ಪೀಡ್ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಭಾರತ ಪ್ರವಾಸ ಕೈಗೊಳ್ಳುತ್ತಿಲ್ಲ ಎಂದು ಬೋರಿಸ್ ವಿಷಾದಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries