ತಿರುವನಂತಪುರ: ಸರ್ಕಾರಿ ನೌಕರರ ವೇತನ, ಸವಲತ್ತುಗಳು ಮತ್ತು ಪಿಂಚಣಿಗಳನ್ನು ಪರಿಷ್ಕರಿಸುವ ಶಿಫಾರಸುಗಳೊಂದಿಗೆ 11 ನೇ ವೇತನ ಆಯೋಗ ಇಂದು(ಶುಕ್ರವಾರ) ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ.
ಸಂಬಳ ಮತ್ತು ಪಿಂಚಣಿಗಳು ಶೇ. 10 ರಷ್ಟು ಹೆಚ್ಚಿಸುವ ನಿರೀಕ್ಷೆಯಿದೆ. ನೌಕರರ ನಿವೃತ್ತಿ ವಯಸ್ಸನ್ನು ಎರಡು ವರ್ಷ ಹೆಚ್ಚಿಸಲು ಆಯೋಗ ಶಿಫಾರಸು ಮಾಡಿದೆ ಎನ್ನಲಾಗಿದೆ. ಆಯೋಗ ತನ್ನ ವರದಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗೆ ಸಲ್ಲಿಸಲಿದೆ.
ವರದಿಯನ್ನು ಪರಿಶೀಲಿಸಲು ಕ್ಯಾಬಿನೆಟ್ ಉಪಸಮಿತಿಯನ್ನು ನೇಮಿಸಲಾಗುವುದು. ವಿಧಾನ ಸಭಾ ಚುನಾವಣೆಯ ನೀತಿ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರುವ ಸಾಧ್ಯತೆ ಇರುವುದರಿಂದ ವರದಿ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸರ್ಕಾರ ವೇತನ ಪರಿಷ್ಕರಣೆ ಆದೇಶ ಹೊರಡಿಸುವ ಸಾಧ್ಯತೆ ಇದೆ.