ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿ ಮಟ್ಟದ ಲೈಫ್ ಭವನ ಯೋಜನೆಯ ಪೂರ್ತಿಕರಣ ಉದ್ಘಾಟನೆ ಹಾಗೂ ಲೈಫ್ ಫಲಾನುಭವಿಗಳ ಸಂಗಮ ಗುರುವಾರ ಪಂಚಾಯತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಎಣ್ಮಕಜೆ ಗ್ರಾಮ ಪಂಚಾಯತಿ ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಉದ್ಘಾಟಿಸಿದರು. ಕ್ಷೇಮ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸೌದಾಬಿ ಹನೀಫ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ಬಿ.ಎಸ್.ಗಾಂಭೀರ್, ಜಯಶ್ರೀ ಕುಲಾಲ್ ಸಹಿತ ಪಂ.ಸದಸ್ಯರು ಉಪಸ್ಥಿತರಿದ್ದರು. ಪಂ.ಸಹ ಕಾರ್ಯದರ್ಶಿ ವರ್ಗೀಸ್ ಸ್ವಾಗತಿಸಿ ವಿಇಒ ವಂದಿಸಿದರು.