ಪೆರ್ಲ: ಕಾಂಗ್ರೆಸ್ ಪಕ್ಷದ ಹಿರಿಯ ನೇತಾರರಾಗಿದ್ದು ಇತ್ತೀಚೆಗೆ ಅಗಲಿದ ಸಾಧು ಕಜಂಪಾಡಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆ ಇತ್ತೀಚೆಗೆ ನಡೆಯಿತು. ಎಣ್ಮಕಜೆ ಮಂಡಲ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಗಾಂಭೀರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂತಾಪ ಸೂಚಕ ಸಭೆಯಲ್ಲಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜೆ.ಎಸ್. ಸಾಧು ಕಜಂಪಾಡಿ ಅವರ ಪಕ್ಷ ಅಭಿಮಾನದ ಬಗ್ಗೆ ನುಡಿ ನಮನ ಸಲ್ಲಿಸಿದರು. ರಮೇಶ್ ಎಂ.ಕೆ.,ಚಂದ್ರಶೇಖರ್ ಭಟ್, ಆನಂದ, ಶಂಕರ ಕಜಂಪಾಡಿ, ರಾಮ ಮೊದಲಾದವರು ಉಪಸ್ಥಿತರಿದ್ದರು.