ಕಾಸರಗೋಡು: ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರ(ಸಿಪಿಸಿಆರ್‍ಐ)ಮ ಕೃಷಿ ವಿಜ್ಞಾನ ಕೇಂದ್ರದ ನೇತೃತ್ವದಲ್ಲಿ ಜೈವ ಕೃಷಿ ವಿಧಾನಗಳ ಬಗ್ಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಫೆಬ್ರವರಿ 25ರ ವರೆಗೆ ತರಬೇತಿ ನಡೆಯಲಿದ್ದು, ಕಾಸರಗೋಡು ಜಿಲ್ಲೆಯ ಆಸಕ್ತ20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ತರಬೇತಿ ಪೂರ್ತಿಗೊಳಿಸುವವರಿಗೆ ಭಾರತ ಸರ್ಕಾರದ ಕೌಶಲ್ಯಾಭಿವೃದ್ಧಿ ಇಲಾಖೆ ನೀಡುವ ಸರ್ಟಿಫಿಕೇಟ್ ವಿತರಿಸಲಾಗುವುದು. ತರಬೇತಿಗೆ ಸೇರ್ಪಡೆಗೊಳ್ಳಲಿಚ್ಛಿಸುವವರು ದೂರವಾಣಿ ಸಂಖ್ಯೆ (04994-232993 ಅಥವಾ 9496296986)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.