ಹೈದರಾಬಾದ್: ನವದೆಹಲಿ- ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತೆಲಂಗಾಣದ ತಂಜೂರು ಮತ್ತು ವಿಕಾರಾಬಾದ್ ನಿಲ್ದಾಣಗಳ ಮಧ್ಯೆ ಭಾನುವಾರ ಸಂಜೆ 7.30 ಕ್ಕೆ ಬೆಂಕಿ ಕಾಣಿಸಿಕೊಂಡಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಲೊಕೊಮೊಟಿವ್ ಎಂಜಿನ್‌ನ ಓವರ್ಹೆಡ್ ಗೆ ಬೆಂಕಿ ಹತ್ತಿಕೊಂಡಿತು ಎನ್ನಲಾಗಿದೆ. ಬಳಿಕ ಘಟನಾ ಸ್ಥಳಕ್ಕೆ ರೈಲ್ವೆ ಭದ್ರತಾ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಸಲಾಯಿತು. ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.