ಬೆಂಗಳೂರು: ಸ್ವಾಮಿ ವಿವೇಕಾನಂದರ ಜನ್ಮದಿನದಂದೆ ಬಸವನಗುಡಿಯ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರು ವಿಧಿವಶರಾಗಿದ್ದಾರೆ.
91 ವರ್ಷ ವಯಸ್ಸಾಗಿದ್ದ ಹರ್ಷಾನಂದ ಅವರಿಗೆ ಇಂದು ಮಧ್ಯಾಹ್ನ 1.05ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.
ಹರ್ಷಾನಂದ ಅವರ ನಿಧನಕ್ಕೆ ಆದಿಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದನಾಥ ಅವರು ಸಂತಾಪ ಸೂಚಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ಹರ್ಷಾನಂದ ಅವರು ಹಲವು ಪುಸ್ತಕಗಳನ್ನು ಬರೆದಿದ್ದರು. Encyclopedia of Hinduism ಎಂಬ ಮಹತ್ತರ ಕೃತಿಯನ್ನು ರಚಿಸಿದ್ದಾರೆ.
ಹರ್ಷಾನಂದರ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದ್ಯಾರ್ಥಿ ಮಂದಿರದಲ್ಲಿ ಇಂದು ಸಂಜೆ 5 ಗಂಟೆಯಿಂದ 8 ಗಂಟೆವರೆಗೂ ಹಾಗೂ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.