ನವದೆಹಲಿ: ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಇಂದು ಸಂಜೆ (ಶುಕ್ರವಾರ) ಕಡಿಮೆ ತೀವ್ರತೆಯ ಐಇಡಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಐದರಿಂದ ಆರು ವಾಹನಗಳು ಜಖಂಗೊಂಡಿವೆ ಎಂದು ಪೆÇಲೀಸರು ತಿಳಿಸಿದ್ದಾರೆ.
ದೆಹಲಿಯ ಔರಂಗಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಿಂದ ಕೇವಲ 50 ಮೀಟರ್ ದೂರದಲ್ಲಿ ಸ್ಫೋಟ ಸಂಭವಿಸಿದ್ದು, ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಪೆÇಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ."ನಾವು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ. ಅನೇಕ ಪೆÇಲೀಸ್ ತಂಡಗಳನ್ನು ಸ್ಥಳಕ್ಕೆ ಕರೆಯಿಸಿಕೊಳ್ಳಲಾಗಿದೆ. ಯಾವ ರೀತಿಯ ವಸ್ತುಗಳು ಸ್ಫೋಟಗೊಂಡಿವೆ ಎಂದು ಇನ್ನೂ ಪತ್ತೆಯಾಗಿಲ್ಲ" ಎಂದು ಹಿರಿಯ ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, "ದೆಹಲಿಯ ಜಿಂದಾಲ್ ಹೌಸ್ ಬಳಿ ರಸ್ತೆ ಡಿವೈಡರ್ ನ ಫ್ಲವರ್ ಪಾಟ್ ನಲ್ಲಿ ಸುಧಾರಿತ ಸ್ಫೋಟಕ ವಸ್ತು ಪತ್ತೆಯಾಗಿದ್ದು, ಚಲಿಸುವ ವಾಹನದಿಂದ ಅದನ್ನು ಎಸೆದಿರುವ ಸಾಧ್ಯತೆ ಇದೆ.
ಸ್ಫೋಟದ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.