ಕಾಸರಗೋಡು: ಕೋವಿಡ್ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಕಾಸರಗೋಡು ಸರ್ಕಾರಿ ಕಾಲೇಜು ಸೋಮವಾರ ಕೋವಿಡ್ ಮಾನದಂಡಗಳಂತೆ ಪುನರಾರಂಭಗೊಂಡಿತು.
ಅಂತಿಮ ಪದವಿ ವಿದ್ಯಾರ್ಥಿಗಳು, ದ್ವಿತೀಯ ಮತ್ತು ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಿದರು. ಒಟ್ಟು ಇರುವ ವಿದ್ಯಾರ್ಥಿಗಳ ಪೈಕಿ ಶೇ.50 ವಿದ್ಯಾರ್ಥಿಗಳಿಗೆ ತರಗತಿ ನಡೆಯಲಿದೆ.