HEALTH TIPS

ತುಳು ರಾಜ್ಯ ಭಾಷೆಯಾಗಲು ಪರಿಶೀಲಿಸಿ ಕ್ರಮ : ಕರ್ನಾಟಕ ಸಿಎಂ ಯಡಿಯೂರಪ್ಪ

               ಬೆಂಗಳೂರು: ''ತುಳು ರಾಜ್ಯ ಭಾಷೆಯಾಗಲು ಸೂಕ್ತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಅಕಾಡೆಮಿಯ ಮನವಿಯನ್ನು ಅಭ್ಯಸಿಸಿ ಸೂಕ್ತ ನಿರ್ಧಾರವನ್ನು ಪ್ರಕಟಿಸಲಾಗುವುದು'' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಅವರು ಮಂಗಳವಾರ ಬೆಳಿಗ್ಗೆ ಮುಖ್ಯಮಂತ್ರಿಯವರನ್ನು ಭೇಟಿ ನೀಡಿ, ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿಸುವ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಸದಸ್ಯೆ ಕಾಂತಿ ಶೆಟ್ಟಿ ಉಪಸ್ಥಿತರಿದ್ದರು.


     ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್ ಮಾತನಾಡಿ, ''ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ತುಳುನಾಡಿನ ಸಮಸ್ತ ಜನರ ಬೇಡಿಕೆಯನ್ನು ಮನದಟ್ಟು ಮಾಡಲಾಗಿದೆ. ಆಶಾದಾಯಕ ಪ್ರತಿಕ್ರಿಯೆ ಸಿಕ್ಕಿದ್ದು, ನಮ್ಮ ಮನವಿಯನ್ನು ಸರಕಾರವು ಪುರಸ್ಕರಿಸಿದ್ದು ಭೇಟಿ ಫಲಪ್ರದವಾಗಿದೆ'' ಎಂದರು.

                      ಕೇಂದ್ರ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗೆ ಬಲ : ಸುರೇಶ್ ಕುಮಾರ್

     ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‌ಸಾರ್ ಅವರು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಅತಿಥಿ ಶಿಕ್ಷಕರ ಸಮಸ್ಯೆ ಬಗ್ಗೆ ಮಾಹಿತಿ ನೀಡಿದರು.

ಕೇಂದ್ರದಿಂದ ಜಾರಿಯಾಗಲಿರುವ ಹೊಸ ಶಿಕ್ಷಣ ನೀತಿಯಿಂದ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಆದ್ಯತೆ ಸಿಗಲಿದೆ. ಇದರಿಂದ ತುಳು ಭಾಷೆಯನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸಹ ನ್ಯಾಯ ಸಿಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries