ನವದೆಹಲಿ: ದೇಶದಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಸಮಸ್ತ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಭಾರತದ ಜನತೆಗೆ ಗಣರಾಜ್ಯೋತ್ಸವ ದಿನದ ಶುಭಾಶಯಗಳು, ಜೈ ಹಿಂದ್ ಎಂದು ಹೇಳಿದ್ದಾರೆ.
ಕೊರೋನಾ ಮಹಾಮಾರಿ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿದೆ. ಈ ಹೆಮ್ಮಾರಿ ಜನರ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ತಂದಿದೆ. ಇದೇ ರೀತಿ ಸಾರ್ವಜನಿಕ ಕಾರ್ಯಕ್ರಮಗಳ ಆಯೋಜನೆಯಲ್ಲೂ ಭಾರಿ ಬದಲಾವಣೆಗಳು ಆಗಿವೆ. ಹೀಗಾಗಿ ಕಳೆದ ವರ್ಷ ಸ್ವಾಂತತ್ರ್ಯೋತ್ಸವನ್ನ ಸರಳವಾಗಿ ಆಚರಿಸಲಾಗಿತ್ತು. ಇದೇ ರೀತಿ ಈ ಬಾರಿಯ ಗಣರಾಜ್ಯೋತ್ಸವವನ್ನ ಸರಳವಾಗಿ ಆಚರಿಸಲಾಗ್ತಿದೆ. ಇದೇ ರೀತಿ ದೆಹಲಿಯ ರಾಜಪಥ ಮತ್ತು ಬೆಂಗಳೂರಿನ ಮಾಣೆಕ್ ಷಾ ಪರೇಡ್ ಗ್ರೌಂಡ್, ತಿರುವನಂತಪುರ ರಾಜಭವನದಲ್ಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.