ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಗೆ ಜಾಮೀನು ನೀಡಲಾಗಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣಗಳಲ್ಲಿ ಮೂರು ದೂರುಗಳು ಶಿವಶಂಕರ್ ವಿರುದ್ಧ ದಾಖಲಾಗಿತ್ತು. ಈ ಪ್ಯೆಕಿ ಮನಿ ಲಾಂಡರಿಂಗ್ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಕೈಗೆತ್ತಿಕೊಂಡಿತ್ತು.
ಕಸ್ಟಮ್ಸ್ ನೋಂದಾಯಿಸಿದ ಪ್ರಕರಣದಲ್ಲಿ ಮತ್ತು ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ ಪ್ರಕರಣದಲ್ಲಿ ಜಾಮೀನು ನೀಡಲಾಯಿತು. ಡಾಲರ್ ಪ್ರಕರಣ ಇತ್ಯರ್ಥಪಡಿಸಲು ಬಾಕಿಯಿದ್ದು ನಂತರವಷ್ಟೇ ಶಿವಶಂಕರ್ ಅವರನ್ನು ಬಿಡುಗಡೆ ಮಾಡಲಾಗುವುದು.
ಕಸ್ಟಮ್ಸ್ ನೋಂದಾಯಿಸಿದ ಪ್ರಕರಣದಲ್ಲಿ ಆರ್ಥಿಕ ಅಪರಾಧಗಳಿಗಾಗಿ ಶಿವಶಂಕರ್ ಅವರಿಗೆ ನ್ಯಾಯಾಲಯ ಸಾಮಾನ್ಯ ಜಾಮೀನು ನೀಡಿತು. ಇಡಿ ನೋಂದಾಯಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾದ 89 ನೇ ದಿನವಾದ ಇಂದು ಜಾಮೀನು ನೀಡಲಾಗಿದೆ.