ಕಾಸರಗೋಡು: ಕೋವಿಡ್ ತಪಾಸಣೆಗೆ ಒಳಗಾಗುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಕೆಲವೆಡೆ ಜನ ಹಿಂದೇಟು ಹಾಕುತ್ತಿರುವುದು ವರದಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ವೈದ್ಯಾಧಿಕಾರಿ ಸಜ್ಜುಗೊಳಿಸಿರುವ ಮೊಬೈಲ್ ಸ್ವಾಬ್ ಕಲೆಕ್ಷನ್ ಘಟಕಗಳನ್ನು ಬಳಸಿ ಕಾಸರಗೋಡು, ಕಾಞಂಗಾಡ್ ಬಸ್ ನಿಲ್ದಾಣಗಳಲ್ಲಿ ಉಚಿತ ರೂಪದಲ್ಲಿ ಆಂಟಿಜೆನ್ ಟೆಸ್ಟ್ ನಡೆಸುವ ಕ್ರಮಕೈಗೊಳ್ಳಲಾಗುವುದು. ಇದಕ್ಕಾಗಿ ಈ ಎರಡೂ ಕಡೆ ಪೆÇಲೀಸ್, ಕಂದಾಯ, ನಗರಸಭೆ ಸಿಬ್ಬಂದಿಯನ್ನು ಆಯಾ ಇಲಾಖೆಗಳು ನೇಮಿಸಲಿವೆ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು.
ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅವಲೋಕನ ನಡೆಸುವ ನಿಟ್ಟಿನಲ್ಲಿ ನಡೆದ ಕೋವಿಡ್ ಕೋರ್‍ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಕಾಸರಗೋಡು-ಮಂಗಳೂರು ಅಂತಾರಾಜ್ಯ ರಸ್ತೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಸೇವೆ ಪುನರಾರಂಭಿಸುವ ತೀರ್ಮಾನ ಸಂಬಂಧ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಅರ್ಜಿ ಕುರಿತು ಪ್ರದಾನ ಕಾರ್ಯದರ್ಶಿ ಮಟ್ಟದಲ್ಲಿ ಕೈಗೊಳ್ಳುವ ತೀರ್ಮಾನ ಪ್ರಕಾರ ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳಲಾಗುವುದು.
ಉತ್ತರ ಮಲಬಾರ್ ತೀಯಾ ಜನಾಂಗದವರು ಈ ವರ್ಷದ ಕಳಿಯಾಟ ಮಹೋತ್ಸವ , ಭರಣಿ ಮಹೋತ್ಸವ ಮುಂದೂಡಲು ನಿರ್ಧರಿಸಿರುವುದು ಜಿಲ್ಲೆಗೆ ಮಾದರಿಯಾಗಿದೆ ಎಂದು ಜಿಲ್ಲ್ಲಾಧಿಕಾರಿ ತಿಳಿಸಿದ್ದಾರೆ. ಅಬಕಾರಿ ಕೇಸುಗಳಲ್ಲಿ ವಶಪಡಿಸಲಾದ ವಾಹನಗಳನ್ನು ಆನ್ ಲೈನ್ ಹರಾಜಿನ ಮೂಲಕ ಮಾರಾಟ ನಡೆಸಲಾಗದೇ ಇರುವ ಹಿನ್ನೆಲೆಯಲ್ಲಿ ಕೋವಿಡ್ ಸಂಹಿತೆ ಪಾಲಿಸಿ ಹರಾಜು ನಡೆಸಲು ನಿರ್ಧರಿಸಲಾಗಿದೆ. ಪರಿಶಿಷ್ಟ ಜಾತಿ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಪೆÇೀಸ್ಟ್ ಮೆಟ್ರಿಕ್, ಮಾದರಿ ವಸತಿ ಶಾಲೆ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತ ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಆ್ಯಂಟಿಜೆನ್ ಟೆಸ್ಟ್ ನಡೆಸಲಾಗುವುದು.ಟ್ಯೂಷನ್ ಸೆಂಟರ್ ಗಳಲ್ಲಿ ಕೋವಿಡ್ ಸಂಹಿತೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲೂ ತೀರ್ಮಾನಿಸಲಾಯಿತು. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಿ.ಶಿಲ್ಪಾ ಹಾಗೂ ಹಿರಯ ಅಧಿಕಾರಿಗಳು ಉಪಸ್ಥಿತರಿದ್ದರು.