ಕಣ್ಣೂರು: ಕೋವಿಡ್ ಬಾಧಿಸಿ ಚಿಕಿತ್ಸೆಯಲ್ಲಿರುವ ಸಿಪಿಎಂ ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಎಂ.ವಿ.ಜಯರಾಜನ್ ಅವರ ಸ್ಥಿತಿ ಗಂಭೀರವಾಗಿದೆ. ಕೋವಿಡ್ ನ ಜೊತೆಗೆ ಮಧುಮೇಹ, ತೀವ್ರವಾದ ನ್ಯುಮೋನಿಯಾ ಅವರ ಆರೋಗ್ಯವನ್ನು ಇನ್ನಷ್ಟು ಹದಗೆಡಿಸುತ್ತಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.
ಅವರು ಪರಿಯಾರಂ ವೈದ್ಯಕೀಯ ಕಾಲೇಜಿನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವೆ ಕೆ.ಕೆ.ಶೈಲಜಾ ಆಸ್ಪತ್ರೆಯ ವೈದ್ಯರನ್ನು ಭೇಟಿ ಮಾಡಿ ಮಾಹಿತಿ ಪಡೆದರು.