ಶ್ರೀನಗರ: 'ಗಣರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಕಾಶ್ಮೀರದಲ್ಲಿ ಆಯೋಜನೆಯಾಗಿದ್ದ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆದ ನಂತರ ಇಂಟರ್‌ನೆಟ್ ಸೇವೆಯನ್ನು ಪುನರಾರಂಭಿಸಲಾಯಿತು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಣರಾಜ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಕಾಶ್ಮೀರ ಕಣಿವೆಯಲ್ಲಿ ಬೆಳಿಗ್ಗೆಯಿಂದ ಕೆಲ ಗಂಟೆಗಳವರೆಗೆ ಮೊಬೈಲ್‌ಗೆ ಒದಗಿಸಲಾಗುತ್ತಿದ್ದ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು.
2005ರಲ್ಲಿ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮಗಳು ನಿಗದಿಯಾಗಿದ್ದ ಸ್ಥಳದ ಸನಿಹ ಉಗ್ರರು ಮೊಬೈಲ್ ಬಳಸಿ ಬಾಂಬ್ ಸ್ಫೋಟಿಸಿದ್ದರು. ಆ ಘಟನೆಯ ನಂತರ ಭದ್ರತೆಯ ದೃಷ್ಟಿಯಿಂದ ವಿಶೇಷ ದಿನಗಳಂದು ಕೆಲ ಕಾಲ ಮೊಬೈಲ್ ಹಾಗೂ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗುತ್ತಿದೆ.