ಕಾಸರಗೋಡು: ಗಡಿನಾಡು ಕಾಸರಗೋಡಿನಲ್ಲಿ ಕನ್ನಡದ ಹೋರಾಟಕ್ಕೆ ಶಕ್ತಿತುಂಬಿದ್ದ ಕಳ್ಳಿಗೆ ಮಹಾಬಲ ಭಂಡಾರಿ ಅವರು ಸಮಾನತೆಯ ಹರಿಕಾರರಾಗಿ, ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು ಎಂದು ಉಪನ್ಯಾಸಕ ಡಾ. ರಾಧಾಕೃಷ್ಣ ಬೆಳ್ಳೂರು ತಿಳಿಸಿದ್ದಾರೆ.
ಅವರು ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ವತಿಯಿಂದ ಪರಿಷತ್ ಕಚೇರಿಯಲ್ಲಿ ನಡೆದ ಕಳ್ಳಿಗೆ ಮಹಾಬಲ ಭಂಡಾರಿ ಸಂಸ್ಮರಣಾ ಸಮಾರಂಭದಲ್ಲಿ ಸಂಸ್ಮರಣಾ ಭಾಷಣ ಮಾಡಿದರು. ಕಸಾಪ ಗಡಿನಾಡ ಘಟಕ ಅಧ್ಯಕ್ಷ ಎಸ್.ವಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಖ್ಯಾತ ಚಿತ್ರಕಲಾವಿದ ಪಿ.ಎಸ್ ಪುಣಿಂಚಿತ್ತಾಯ ಅವರು ಕಳ್ಳಿಗೆ ಅವರೊಂದಿಗಿನ ಒಡನಾಟದ ಬಗ್ಗೆ ಮಾತನಾಡಿ, ಅವರ ವ್ಯಕ್ತಿತ್ವದ ಪರಿಚಯ ನೀಡಿದರು.
ನಿವೃತ್ತ ಪ್ರಾಧ್ಯಾಪಕ ಡಾ. ಕೆ. ಕಮಲಾಕ್ಷ, ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ, ವೈದ್ಯ ಸಾಹಿತಿ ಡಾ. ರಮಾನಂದ ಬನಾರಿ ಉಪಸ್ಥಿತರಿದ್ದರು. ವಿದುಷಿ ವಿ.ಹರಿಣಾಕ್ಷಿ ಮತ್ತು ಸಿ.ಎಚ್ ರಾಮಮೂರ್ತಿ ಅವರಿಂದ ಗಾನಸುಧೆ ಕಾರ್ಯಕ್ರಮ ಜರುಗಿತು. ಕಸಾಪ ಗೌರವಕಾರ್ಯದರ್ಶಿ ಪಿ.ರಾಮಚಂದ್ರ ಭಟ್ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಸುಬ್ಬಣ್ಣ ಆಳ್ವ ಕಾರ್ಯಕ್ರಮ ನಿರೂಪಿಸಿದರು.ನವೀನ್‍ಚಂದ್ರ ಎಂ.ಎಸ್ ವಂದಿಸಿದರು.