ತಿರುವನಂತಪುರ: ಕೇರಳದಲ್ಲಿ ಕೋವಿಡ್ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ವೈದ್ಯಕೀಯ ತಂಡ ಕಳಿಸಬೇಕೆಂದು ಬೇಡಿಕೆಯೊಂದಿಗೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಪ್ರಧಾನಿಗೆ ಪತ್ರ ಬರೆದಿದ್ದಾರೆ.
ದೇಶದಲ್ಲಿ ಸಕ್ರಿಯವಾಗಿರುವ ಪ್ರಕರಣಗಳಲ್ಲಿ ಕೇರಳದಲ್ಲಿ ಶೇ.26 ರಷ್ಟಿದೆ. ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ದೇಶದಲ್ಲಿ ಟೆಸ್ಟ್ ಪಾಸಿಟಿವಿಟಿ ದರವು ಎರಡು ಶೇಕಡಾ ಇದ್ದರೆ, ಕೇರಳದಲ್ಲಿ ಅದು ಹತ್ತು ಶೇಕಡಾ ಇದೆ. ಇದು ರಾಷ್ಟ್ರೀಯ ಸರಾಸರಿಗಿಂತ ಐದು ಪಟ್ಟು ಹೆಚ್ಚಾಗಿದೆ ಎಂದು ಸುರೇಂದ್ರನ್ ಹೇಳಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಕೋವಿಡ್ ರೋಗಿಗಳನ್ನು ಹೊಂದಿರುವ ಜಿಲ್ಲೆಗಳನ್ನು ತೆಗೆದುಕೊಂಡರೆ 12 ಜಿಲ್ಲೆ ಕೇರಳದಲ್ಲಿದೆ. ಮತ್ತು ರಾಜ್ಯದಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿಲ್ಲ ಎಂದು ಸುರೇಂದ್ರನ್ ಪತ್ರದಲ್ಲಿ ತಿಳಿಸಿದ್ದಾರೆ.