ಅಂಕೋಲ: ಕೇಂದ್ರ ಸಚಿವ ಶ್ರೀಪಾದ ನಾಯಕ್ ಕಾರು ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಸಚಿವರ ಪತ್ನಿ ಮತ್ತು ಆಪ್ತ ಕಾರ್ಯದರ್ಶಿ ದುರ್ಮರಣಕ್ಕೀಡಾದ ಘಟನೆ ಕರ್ನಾಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಅಂಕೋಲ ತಾಲೂಕು ಹೊಸಕಂಬಿಯಲ್ಲಿ ನಡೆದ ಅಪಘಾತದಲ್ಲಿ ಸಚಿವರ ಕಾರು ಅಪಘಾತಕ್ಕೀಡಾಗಿದೆ. ಚಾಲಕನ ನೊಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಸಚಿವರ ಪತ್ನಿ ವಿಜಯಾ ಶ್ರೀಪಾದ್ ನಾಯಕ್ ಸಾವಿಗೀಡಾಗಿದ್ದಾರೆ.
ಕೇಂದ್ರ ಆಯುಶ್ ಸಚಿವರಾದ ಶ್ರೀಪಾದ್ ನಾಯಕ್ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಿಸದೆ ಸಚಿವರ ಆಪ್ತ ಕಾರ್ಯದರ್ಶಿ ಸಹ ಸಾವಿಗೀಡಾಗಿದ್ದಾರೆ.
ತಾಲೂಕು ಸರ್ಕಾರಿ ಆಸ್ಪತ್ರೆಗೆ ಮೂವರನ್ನು ದಾಖಲಿಸಲಾಗಿತ್ತು, ಅದರಲ್ಲಿ ಒಬ್ಬರು ಮೃತಪಟ್ಟಿದ್ದು, ಸಚಿವರನ್ನು ಗೋವಾದ ಬಾಂಬೋಲಿಯಮ್ ಆಸ್ಪತ್ರೆಗೆ ರವಾನಿಸಲಾಗಿದೆ, ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆಪ್ತ ಕಾರ್ಯದರ್ಶಿ ದೀಪಕ್ ರಾಮದಾಸ್ ಕೂಡಾ ಮೃತಪಟ್ಟಿದ್ದಾರೆ.
ಸೋಮವಾರ ಯಲ್ಲಾಪುರ ತಾಲೂಕಿನ ಗಂಟೆ ಗಣಪತಿ ದೇವಾಲಯಕ್ಕೆ ಭೇಟಿ ನೀಡಿ ಗೋಕರ್ಣಕ್ಕೆ ತೆರಳುವಾಗ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಕಾರು ಪಲ್ಟಿಯಾಗಿದೆ.
ಅಂಕೋಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.