ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 9112 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 117 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 8 ತಿಂಗಳ ಬಳಿಕ ಹೊಸ ಪ್ರಕರಣಗಳ ಸಂಖ್ಯೆ 9 ಸಾವಿರಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,06, 76, 838 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,53,587 ಮಂದಿ ಸಾವಿಗೀಡಾಗಿದ್ದಾರೆ.
1,03,45,985 ಸೋಂಕಿತರು ಗುಣಮುಖರಾಗಿದ್ದು, 1,77,266 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 12 ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡವರ ಪ್ರಮಾಣ ಶೇ.96.90ಕ್ಕೆ ತಲುಪಿದ್ದು, ಶೇ. 1.66 ಸಕ್ರಿಯ ಪ್ರಕರಣಗಳಿವೆ. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ. 1.44 ಇದೆ.