ತಿರುವನಂತಪುರ: ರಾಜ್ಯದಲ್ಲಿ ಕೊರೋನಾ ತಡೆಗಟ್ಟುವ ಚಟುವಟಿಕೆಗಳು ಸಮರೋಪಾದಿಯಲ್ಲಿದೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸಾವಿನ ಸಂಖ್ಯೆ 4000 ಸನಿಹದಲ್ಲಿದೆ. ಪ್ರಸ್ತುತ, 3,985 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅನಧಿಕೃತ ಅಂದಾಜಿನ ಪ್ರಕಾರ ಸಾವಿನ ಸಂಖ್ಯೆ 4,100 ಆಗಿದೆ.
ಕೇರಳದಲ್ಲಿ ಕೊರೋನಾ ಸಂತ್ರಸ್ತರ ಸಂಖ್ಯೆ ಇದುವರೆಗೆ 10 ಲಕ್ಷ ದಾಟಿದೆ. ಈವರೆಗೆ 10,03,867 ಜನರು ಸೋಂಕಿಗೆ ಒಳಗಾಗಿದ್ದಾರೆ. ಒಟ್ಟು 4,612 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರೊಂದಿಗೆ, ಕೇರಳದಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 63,000 ಕ್ಕಿಂತ ಹೆಚ್ಚಿದೆ. ವಿವಿಧ ಜಿಲ್ಲೆಗಳಲ್ಲಿ 63,484 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 2,48,669 ಜನರು ಕಣ್ಗಾವಲಿನಲ್ಲಿದ್ದಾರೆ. ಈ ಪೈಕಿ 2,38,545 ಮನೆ / ಸಾಂಸ್ಥಿಕ ಸಂಪರ್ಕತಡೆ ಮತ್ತು 10,124 ಮಂದಿ ಜನರು ಆಸ್ಪತ್ರೆಗಳಲ್ಲಿದ್ದಾರೆ. ಭಾನುವಾರ ಒಟ್ಟು 1237 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.